ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ. 61.88 ರಷ್ಟು ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ಎಂದಿನಂತೆ ಈ ಸಾಲಿನಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ಪ್ರಾಥಮಿಕ ಮತ್ತು ಫ್ರೌಡ ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿ ವಿವರಣೆ ನೀಡಿದರು.
ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresults.nic.in ಗೆ ಭೇಟಿ ನೀಡಬಹುದು.
4,02,697 ಹೊಸ ವಿದ್ಯಾರ್ಥಿಗಳು, 14,403 ಪುನರಾವರ್ತಿತ ವಿದ್ಯಾರ್ಥಿಗಳು, 5,866 ಖಾಸಗಿ ವಿದ್ಯಾರ್ಥಿಗಳು ಸೇರಿ ಒಟ್ಟು 4,22,966 ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
346557 ಬಾಲಕರು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 191380 ಬಾಲಕರು ಉತ್ತೀರ್ಣರಾಗಿದ್ದಾರೆ. 337006 ಬಾಲಕಿಯರ ಪೈಕಿ 231586 ಬಾಲಕಿಯರು ತೇರ್ಗಡೆಹೊಂದಿದ್ದಾರೆ.