ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂಗಾರು ಬಿರುಸು ಪಡೆದಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಮಂಗಳವಾರ ದಿನವಿಡೀ ಉತ್ತಮ ಮಳೆಯಾಗಿದೆ. ದ.ಕ, ಉಡುಪಿ ಜಿಲ್ಲೆಯ ಅಲ್ಲಲ್ಲಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ್ದು, ಕೆಲವೊಂದು ಸಣ್ಣಪುಟ್ಟ ಘಟನೆ ಹೊರತು ಪಡಿಸಿದರೆ ಉಳಿದಂತೆ ಉಭಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.
ರಾಜ್ಯ ಕರಾವಳಿ ಭಾಗದಲ್ಲಿ ಮುಂಗಾರು ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನಗಳವರೆಗೆ ಭಾರತೀಯ ಹವಾಮಾನ ಇಲಾಖೆಯು “ಆರೆಂಜ್ ಅಲರ್ಟ್’ ಘೊಷಿಸಿದೆ. ಜೂ. 22ರಿಂದ 24ರ ವರೆಗೆ ಕರಾವಳಿ ಭಾಗದಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ನಿರೀಕ್ಷೆ ಇದೆ. ಮಳೆಯ ಜತೆ ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ.