ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ| 155 ಮಂದಿ ಸಾವು

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದಲ್ಲಿ ಪ್ರಭಲ ಭೂಕಂಪನ ಸಂಭವಿಸಿದ್ದು, ಈ ಭೂಕಂಪದಲ್ಲಿ 155 ಮಂದಿ ಸಾವನ್ನಪ್ಪಿರುವ ಮಾಹಿತಿ ಹೊರಬಿದ್ದಿದೆ. ಇನ್ನು ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.

Ad Widget ... ..

ಹೆಚ್ಚಿನ ಸಾವುಗಳು ಪಕ್ತಿಕಾ ಪ್ರಾಂತ್ಯದಲ್ಲಿ ಸಂಭವಿಸಿದ್ದು, ಅಲ್ಲಿ 100 ಜನರು ಸಾವನ್ನಪ್ಪಿದ್ದಾರೆ ಮತ್ತು 250 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಆಡಳಿತದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಮೊಹಮ್ಮದ್ ನಾಸಿಮ್ ಹಕ್ಕಾನಿ ಹೇಳಿದ್ದಾರೆ.

Ad Widget

ಅಧಿಕಾರಿಗಳು ಹೆಚ್ಚಿನ ಸಾವುನೋವುಗಳನ್ನು ಪರಿಶೀಲಿಸುತ್ತಿರುವುದರಿಂದ ಪೂರ್ವ ಪ್ರಾಂತ್ಯಗಳಾದ ನಂಗರ್ಹಾರ್ ಮತ್ತು ಖೋಸ್ಟ್ ನಲ್ಲಿಯೂ ಸಾವುಗಳು ವರದಿಯಾಗಿವೆ‌ ಎಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *