Ad Widget .

ಶೌಚಾಲಯ ಕಟ್ಟಡ ನಿರ್ಮಾಣ ಸ್ಥಳ ಬದಲಾವಣೆ ಆರೋಪ| ಅಂಬೇಡ್ಕರ್ ರಕ್ಷಣಾ ವೇದಿಕೆ ಪ್ರತಿಭಟನೆ

ಸಮಗ್ರ ನ್ಯೂಸ್: ಸುಳ್ಯ ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ ಸುಳ್ಯ ಕೊಡಿಯಾಲ ಬೈಲು ದಲಿತರ ಕಾಲೋನಿಗೆ ಬಂದ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡವನ್ನು ಕೊಡಿಯಾಲಬೈಲು ಹಿಂದೂ ರುದ್ರಭೂಮಿ ಒಳಗಡೆ ಮಾಡಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಸುಳ್ಯ ತಾ.ಪಂ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪ್ರತಿಭಟನೆಯಲ್ಲಿ ಮಾತನಾಡಿದ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ, ಸರಕಾರದಿಂದ ದಲಿತ ಸಮುದಾಯದ ಕಾಲೋನಿಗೆ ಬಂದಿರುವಂತಹ ಅನುದಾನ ಬೇರೆಡೆ ವರ್ಗಾಯಿಸಿ ನಮ್ಮ ಸಮುದಾಯದವರಿಗೆ ಅನ್ಯಾಯ ಮಾಡಿದ್ದಾರೆ. ಇದರ ಬಗ್ಗೆ ಮುಖ್ಯಮಂತ್ರಿಯವರ ಕಚೇರಿಯಿಂದ ಕ್ರಮ ಕೈಗೊಳ್ಳುವಂತೆ ಇಲ್ಲಿಯ ಅಧಿಕಾರಿಗಳಿಗೆ ಪತ್ರ ಬಂದಿದ್ದರು ಅದರ ಬಗ್ಗೆ ಯಾವುದೇ ಕ್ರಮವನ್ನು ಇವರು ಕೈಗೊಳ್ಳುತ್ತಿಲ್ಲ. ಆದ್ದರಿಂದ ನಮಗೆ ನ್ಯಾಯ ಸಿಗುವವರೆಗೆ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು ಹೇಳಿದರು.

Ad Widget . Ad Widget . Ad Widget .

ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಮೋಹನ್ ಕುಮಾರ್ ಅಡ್ಕಬಳೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ ನಮ್ಮ ಸಮುದಾಯದವರಿಗೆ ಅನ್ಯಾಯವಾದರೆ ನಾವು ಸುಮ್ಮನಿರುವುದಿಲ್ಲ. ಕಾಲೋನಿ ಅವರಿಗೆ ಇದರ ಮಾಹಿತಿ ಇರುವುದಿಲ್ಲ ಎಂದು ಅವರನ್ನು ಮೋಸ ಮಾಡಿದ್ದಾರೆ ಎಂದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸುಳ್ಯ ತಾಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಘಟನೆಯ ಕುರಿತು ಮೇಲಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ. ಆದ್ದರಿಂದ ನಮ್ಮ ವತಿಯಿಂದ ಬೇಕಾದ ಎಲ್ಲ ಮಾಹಿತಿಗಳನ್ನು ಅವರಿಗೆ ನೀಡಿದ್ದೇವೆ. ಉತ್ತರ ಬರುವ ವರೆಗೆ ಕಾಯಬೇಕಾದ ಕಾರಣ ಪ್ರತಿಭಟನೆಯನ್ನು ಕೈಬಿಡಬೇಕೆಂದು ಕೇಳಿಕೊಂಡರು.

ಇದಕ್ಕೆ ಒಪ್ಪಿದ ಸಂಘಟನಾಕಾರರು ಮೇಲಧಿಕಾರಿಗಳ ಉತ್ತರ ಬರುವವರಿಗೆ ಕಾಯುವ ನಿರ್ಧಾರವನ್ನು ತೆಗೆದುಕೊಂಡು ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಕೈ ಬಿಡುತ್ತಿದ್ದೇವೆ ಎಂದು ಮಾಧ್ಯಮದವರಿಗೆ ತಿಳಿಸಿದ್ದಾರೆ.

Leave a Comment

Your email address will not be published. Required fields are marked *