ಬಿ.ಕಾಂ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆ

ಸಮಗ್ರ ನ್ಯೂಸ್ : ಬಿ.ಕಾಂ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಂಗಳೂರು ಹೊರವಲಯ ತಾಲೂಕಿನ ಎಲೆಕ್ಟ್ರಾನ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Ad Widget ... ..

ಈ ಘಟನೆ ನಿನ್ನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಶಾಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಒಳಗಾದ ಬಿಕಾಂ ವಿದ್ಯಾರ್ಥಿ, ಪ್ರಶಾಂತ್ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದು, ಜಯನಗರದ ವಿಜಯ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದನು.

Ad Widget

ಕಳೆದ ವಾರದಿಂದ ಕಾಲೇಜಿನಲ್ಲಿ ಯುವಕರ ಜೊತೆ ಗಲಾಟೆ ಮಾಡಿಕೊಂಡಿದ್ದರಂತೆ.

ಕಾಲೇಜಿನ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ.

ನಿನ್ನೆ ರಾತ್ರಿ ಊಟ ಮುಗಿಸಿ ರೂಮ್ ನಲ್ಲಿ ಮಲಗುವಾಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಳಿಕ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆದರೆ ದಾರಿ ಮಧ್ಯೆ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಮೃತಪಟ್ಟ ವಿದ್ಯಾರ್ಥಿ ಪ್ರಶಾಂತ್ ಎಚ್‌ಎಸ್‌ಆರ್ ಲೇಔಟ್ ಪೋಲಿಸ್ ಕೆಲಸ ಮಾಡುವ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ನಾಗರಾಜು ಮಗ ನೆಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *