ನೂಪುರ್ ಶರ್ಮಾರನ್ನು ಬೆಂಬಲಿಸಿ ಪೋಸ್ಟ್ ಹಾಕಿದವರ ರುಂಡ ಚೆಂಡಾಡಿದ ದುಷ್ಕರ್ಮಿಗಳು| ಮೋದಿಯನ್ನೂ ಕೊಲ್ಲುವುದಾಗಿ ಬೆದರಿಕೆ

ಸಮಗ್ರ ನ್ಯೂಸ್: ನುಪೂರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಅಂಗಡಿ ಮಾಲೀಕನ ಶಿರಚ್ಛೇದ ಮಾಡಲಾಗಿದೆ. ವ್ಯಕ್ತಿಯನ್ನು ದುಷ್ಕರ್ಮಿಗಳು ಶಿರಶ್ಚೇಧ ಮಾಡಿದ್ದಾರೆ. ಉದಯಪುರ ನಗರದ ಮಾಲ್ಡಾಸ್ ಸ್ಟ್ರೀಟ್ ಪ್ರದೇಶದಲ್ಲಿ ಘಟನೆ ನಡೆದಿದೆ.

Ad Widget ... ..

ಶಿರಚ್ಛೇದನದ ಬಳಿಕ ದುಷ್ಕರ್ಮಿಗಳು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಶಿರಚ್ಛೇದನ ಮಾಡಿದ್ದಕ್ಕೆ ಹೆಮ್ಮೆಯಿದೆ ಎಂದು ದುಷ್ಕರ್ಮಿಗಳು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆನ್ನಲಾಗಿದೆ.

Ad Widget

ಉದಯಪುರದ ಧನ್ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ಕನ್ಹಯ್ಯಾ ಲಾಲ್ ಟೈಲರಿಂಗ್ ಅಂಗಡಿ ನಡೆಸುತ್ತಿದ್ದರು. ಹಂತಕರು ಬಟ್ಟೆ ಹೊಲಿಯುವ ನೆಪದಲ್ಲಿ ಆತನ ಅಂಗಡಿಗೆ ಬಂದು ಹತ್ಯೆಗೈದಿದ್ದಾರೆ. ಅಷ್ಟೇ ಅಲ್ಲ ಇಡೀ ಘಟನೆಯ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ.

ಘಟನೆ ಬಳಿಕ ಉದ್ವಿಗ್ನ ಸ್ಥಿತಿ ಉಂಟಾಗಿದ್ದು, ಜನ ಶಾಂತಿ ಕಾಪಾಡುವಂತೆ ಸಿಎಂ ಗೆಹ್ಲೋಟ್ ಮನವಿ ಮಾಡಿದ್ದಾರೆ.

ಉದಯಪುರದಲ್ಲಿ ಯುವಕನ ಭೀಕರ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಈ ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

Leave a Comment

Your email address will not be published. Required fields are marked *