ಮಂಗಳೂರು: ಭಾರೀ ಮಳೆ ಹಿನ್ನಲೆ; ಶಾಲಾ ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಬಿರುಸಾಗಿದ್ದು, ಬುಧವಾರದಂತೆ ಗುರುವಾರವೂ ಬಿಡದೆ ಸುರಿಯುತ್ತಿದೆ. ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ವಿಶೇಷ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Ad Widget ... ..

ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಶಾಲೆಗಳು ಕಾರ್ಯ ನಿರ್ವಹಿಸಬೇಕು, ಮಕ್ಕಳು ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದಲ್ಲಿ ಅಂತಹ ಮಕ್ಕಳಿಗೆ ಈ ದಿನ ರಜೆ ನೀಡಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಸೂಚಿಸಿದ್ದಾರೆ.

Ad Widget

ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Leave a Comment

Your email address will not be published. Required fields are marked *