ಮುಂದುವರಿದ ವರ್ಷಧಾರೆ| ರಾಜ್ಯದಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ; ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮುಂದಿನ 2 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

. Ad Widget . Ad Widget . Ad Widget

ಕರ್ನಾಟಕದ ಕೊಡಗು,ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

. Ad Widget .

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ 2 ದಿನ ಆರೆಂಜ್ ಅಲರ್ಟ್ ಘೋಷಿಸಿದೆ. ಇದಲ್ಲದೇ ಜುಲೈ.6 ಮತ್ತು 7ರಂದು ವ್ಯಾಪಕ ಮಳೆಯಾಗುವ ಕಾರಣ, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಿಸಿದೆ.

ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ.7ರವರೆಗೆ ಭಾರೀ ಮಳೆಯಾಗಲಿದೆ. ಬೀದರ್, ರಾಯಚೂರು, ಧಾರವಾಡ, ವಿಜಯಪುರ, ಬಾಗಲಕೋಟೆ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗೋ ಕಾರಣ ಯೆಲ್ಲೋ ಅಲರ್ಟ್ ಘೋಷಿಸಿದೆ.

Leave a Comment

Your email address will not be published. Required fields are marked *