ಮನೆಯೊಂದರಿಂದ 10 ಗೋಣಿ ಕಾಳುಮೆಣಸು ಕದ್ದು ಸಾಗಿಸುತ್ತಿದ್ದ ಐದು ಆರೋಪಿಗಳ ಬಂಧನ

ಸಮಗ್ರ ನ್ಯೂಸ್ : ಕಳ್ಳರು ಮನೆಯೊಂದರಿಂದ ಕದ್ದಿದ್ದ 10 ಗೋಣಿ ಕಾಳುಮೆಣಸನ್ನು ಸಾಗಿಸುತ್ತಿದ್ದ ವೇಳೆ ಬೆಳ್ಳಾರೆ ಠಾಣಾ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ.

Ad Widget ... ..

ಬಂಧಿತ ಆರೋಪಿಗಳನ್ನು ಸುಳ್ಯ ತಾಲೂಕಿನ ಕಳಂಜಿ ಮನೆ ನಿವಾಸಿ ಮಂಜು, ಕೊಡಿಯಭೈಲು ಮನೆ ನಿವಾಸಿ ಪ್ರವೀಣ, ಜಾಲ್ಸೂರು ಗ್ರಾಮದ ಬರ್ಪೆಡ್ಕ ನಿವಾಸಿ ಪವನ್ ಕುಮಾರ್ ಹಾಗು ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಅಬ್ದುಲ್ ಬಾಶೀತ್ ಎಂದು ಗುರುತಿಸಲಾಗಿದೆ.

Ad Widget

ಈ ಕೃತ್ಯದಲ್ಲಿ ಒಟ್ಟು ಐವರು ಭಾಗಿಯಾಗಿದ್ದು ಇನ್ನೊಬ್ಬ ಅಪ್ರಾಪ್ತ ಬಾಲಕ. ಕೊಳ್ತಿಗೆ ಗ್ರಾಮದ ಕುದ್ಕುಳಿ ಶಾಫಿ ಎಂಬವರ ಗೋದಾಮಿನಲ್ಲಿ ತುಂಬಿಸಿಡಲಾಗಿದ್ದ 1,18,750 ರೂ. ಮೌಲ್ಯದ 10 ಗೋಣಿ ಕಾಳುಮೆಣಸನ್ನು ಜೂ. 15ರಂದು ಕಳ್ಳತನಗೈಯಲಾಗಿತ್ತು.

ಈ ಬಗ್ಗೆ ತೋಟ ನೋಡಿಕೊಳ್ಳುತ್ತಿದ್ದ ಆದಂ ಕುಂಞಿ ಎಂಬವರು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದರು.

ಆರೋಪಿಗಳು

ಇದರಂತೆ ತನಿಖೆ ವೇಳೆ ಬೆಳ್ಳಾರೆ ಠಾಣಾ ಉಪನಿರೀಕ್ಷಕರಿಗೆ ದೊರೆತ ಮಾಹಿತಿ ಅಧಾರದಲ್ಲಿ ಜುಲೈ 4 ರಂದು ಅಡ್ಕಾರ್‌ ನಲ್ಲಿ ಕಾರೊಂದನ್ನು ತಡೆದು ಮಂಜು ಎಂಬಾತನನ್ನು ವಶಕ್ಕೆ ಪಡೆದು, ಆತ ನೀಡಿದ ಮಾಹಿತಿಯಂತೆ ಆರೋಪಿ ಪವನ್ ಕುಮಾರ್‌ ಎಂಬಾತನ ಮನೆಯಲ್ಲಿ ಕಳವು ಮಾಡಿ ಬಚ್ಚಿಟ್ಟಿದ್ದ 10 ಗೋಣಿ ಕಾಳು ಮೆಣಸನ್ನು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ

Leave a Comment

Your email address will not be published. Required fields are marked *