ಸಮಗ್ರ ನ್ಯೂಸ್: ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗಡೆ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯ ಮಾದರಿಯಾಗಿದೆ. ಅವರು ಸಂಸತ್ತಿಗೆ ಆಯ್ಕೆಯಾಗಿರುವುದು ಅಭಿನಂದನಾರ್ಹ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಕೇಂದ್ರ ಸರಕಾರ ನಾಮನಿರ್ದೇಶನ ಮಾಡಿದೆ.
ಇವರ ಜೊತೆ ಖ್ಯಾತ ಅಥ್ಲೀಟ್ ಪಿ.ಟಿ. ಉಷಾ ಹಾಗೂ ಸಂಗೀತ ನಿರ್ದೇಶಕ ಇಳಯರಾಜ ಮತ್ತು ಕೆ.ವಿ. ವಿಜಯೇಂದ್ರ ಪ್ರಸಾದ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ನಾಲ್ಕು ನಾಮನಿರ್ದೇಶಿತ ಸದಸ್ಯರು ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಾಗಿದ್ದಾರೆ. ಅವರ ಕೊಡುಗೆಗಳಿಗಾಗಿ ರಾಷ್ಟ್ರೀಯ ಮತ್ತು ಜಾಗತಿಕ ಮನ್ನಣೆಯನ್ನು ಪಡೆದಿದ್ದಾರೆ. ನಾಲ್ಕು ನಾಮನಿರ್ದೇಶಿತ ಪ್ರತಿನಿಧಿಗಳಲ್ಲಿ ಮೂವರು ದಕ್ಷಿಣ ಭಾರತದ ವಿವಿಧ ರಾಜ್ಯಗಳನ್ನು ಪ್ರತಿನಿಧಿಸುತ್ತಾರೆ.