ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ| ಮೂವರು ಸ್ಥಳದಲ್ಲೇ ಸಾವು

ಸಮಗ್ರ‌ ನ್ಯೂಸ್: ಕೆಎಸ್ ಆರ್‌ಟಿಸಿ ಬಸ್ಸು ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಮತ್ತಿಹಳ್ಳಿ ಬಳಿ ನಡೆದಿದೆ.

Ad Widget ... ..

ಕಾರು ಮತ್ತು ಬಸ್ಸು ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಉಳಿದ ಇಬ್ಬರಿಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರಿನ ತಿಪಟೂರು ತಾಲೂಕಿನ ಮತ್ತಿಹಳ್ಳಿಯಲ್ಲಿ ಘಟನೆ ನಡೆದಿದೆ.

Ad Widget

ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದ KSRTC ಬಸ್ಸು ಮತ್ತು ತುಮಕೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಕಾರು ಎಂದು ಗುರುತಿಸಲಾಗಿದೆ. ಈ ಬಗ್ಗೆ ಈಗಾಗಲೇ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *