ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ| ನಟ ಶ್ರೀಜಿತ್‌ ರವಿ ಫೋಕ್ಸೋ ಕಾಯ್ದೆಯಡಿ ಅರೆಸ್ಟ್

ಸಮಗ್ರ ನ್ಯೂಸ್: ಮಲೆಯಾಳಂನ ಖ್ಯಾತ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಮೇಲೆ ಶ್ರೀಜಿತ್ ರವಿ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

Ad Widget ... ..

ಜುಲೈ 4 ರಂದು ಅಯ್ಯಂತೊಳೆ ಎಸ್‌ಎನ್‌ ಪಾರ್ಕ್‌ನಲ್ಲಿ ಈ ಘಟನೆ ನಡೆದಿದೆ.ಸದ್ಯ ಶ್ರೀಜಿತ್‌ ರವಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಲಾಗಿದೆ ಎಂದು ತ್ರಿಶೂರ್ ಪಶ್ಚಿಮ ವಿಭಾಗದ ಪೊಲೀಸರು ತಿಳಿಸಿದ್ದಾರೆ. ಇಬ್ಬರು ಅಪ್ರಾಪ್ತ ಬಾಲಕಿಯರು ನಿಂತಿದ್ದ ವೇಳೆ ತನ್ನ ಕಾರಿನಲ್ಲಿ ಕುಳಿತಿದ್ದ ಶ್ರೀಜಿತ್ ಕಾರಿನಿಂದ ಕೆಳಗಿಳಿದು ಗುಪ್ತಾಂಗವನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಲಾಗಿದೆ

Ad Widget

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ ಬಳಿಕ ರವಿ ಅವರನ್ನು ಬಂಧಿಸಲಾಗಿದೆ. ಇಬ್ಬರು ಮಕ್ಕಳ ಪೋಷಕರು ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 2016ರಲ್ಲಿ ಪಾಲಕ್ಕಾಡ್ ಪೊಲೀಸರು ಇದೇ ರೀತಿಯ ಪ್ರಕರಣದಲ್ಲಿ ರವಿಯನ್ನು ಬಂಧಿಸಿದ್ದರು.

Leave a Comment

Your email address will not be published. Required fields are marked *