ಸಮಗ್ರ ನ್ಯೂಸ್: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಇಂದು ಬೆಳಿಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ.
ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆ ಆರಂಭವಾದ ಸಂಚಾರಕ್ಕೆ ಅಡಚಣೆ 10.30 ಗಂಟೆ ವರೆಗೂ ಮುಗಿದಿಲ್ಲ. ಕಲ್ಲಡ್ಕ ಅಮ್ಟೂರು ಕ್ರಾಸ್ ನ ಬಳಿ ಹೆದ್ದಾರಿಯಲ್ಲಿ ಬೃಹತ್ ಹೊಂಡ ವೊಂದು ನಿರ್ಮಾಣವಾದ ಹಿನ್ನೆಲೆಯಲ್ಲಿ ಪ್ರಾರಂಭವಾದ ಬ್ಲಾಕ್ ನಿರಂತರವಾಗಿ ಮುಂದುವರಿದಿದೆ.
ಬೆಳಿಗ್ಗೆ ಹೊತ್ತು ಕೆಲಸಕ್ಕೆ ಹೋಗುವವರ ಜೊತೆ ಅಂಬ್ಯುಲೆನ್ಸ್ ವಾಹನಗಳು ಕೂಡ ತಾಸು ಗಟ್ಟಲೆ ಕ್ಯೂ ನಲ್ಲಿ ನಿಂತು ಪರದಾಡಬೇಕಾಯಿತು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಯ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿ ಗುಂಡಿ ಮುಚ್ಚುವ ಕಾರ್ಯ ಮಾಡಿದೆ.ಆದರೆ ಕಾಮಗಾರಿ ಆರಂಭವಾದ ಬಳಿಕ ನಿರಂತರವಾಗಿ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆಯಾದರೂ ಈ ರೀತಿಯಲ್ಲಿ ತಾಸುಗಟ್ಟಲೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬೆಳಗ್ಗೆ ಮತ್ತು ಸಂಜೆಯಿಂದ ರಾತ್ರಿ ವರೆಗೆ ಹೆಚ್ಚಿನ ಮಟ್ಟದಲ್ಲಿ ಸಂಚಾರಕ್ಕೆ ತಡೆ ಉಂಟಾಗುತ್ತಿದೆ. ತಾಸು ಗಟ್ಟಲೆ ವಾಹನಗಳು ನಿಧಾನಗತಿಯಲ್ಲಿ ಸಂಚರಿಸುವ ಪರಿಸ್ಥಿತಿ ಇದೆ ಎಂದು ಸ್ಥಳೀಯರು ದೂರಿದ್ದಾರೆ.