ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ; 14 ಜಿಲ್ಲೆಗಳಿಗೆ ವಿಸ್ತರಿಸಿದ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಹಿನ್ನಲೆಯಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಮುಂದಿನ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.

Ad Widget ... ..

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ 14 ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Ad Widget

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ.

ಇನ್ನು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಯಾದಗಿರಿ, ವಿಜಯಪುರ, ಕಲಬುರ್ಗಿ, ಹಾವೇರಿ, ಧಾರವಾಡ, ಬೀದರ್‌, ಬೆಳಗಾವಿ ಜಿಲ್ಲೆಗಳಲ್ಲೂ ಇಂದು ಭಾರಿ ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Leave a Comment

Your email address will not be published. Required fields are marked *