ಕಡಬ: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ವಿವಾಹ ನಿಶ್ಚಿತಾರ್ಥವಾಗಿದ್ದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ದೋಲ್ಪಾಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಲೋಕೇಶ್(21) ಎಂದು‌ ಗುರುತಿಸಲಾಗಿದೆ.

Ad Widget ... ..

ಕೂಲಿ ಕೆಲಸ ಮಾಡಿಕೊಂಡಿದ್ದ ಈತನಿಗೆ ಕೆಲ ತಿಂಗಳ ಹಿಂದೆ ವಿವಾಹ ನಿಶ್ಚಯವಾಗಿದ್ದು, ಕಾರಣಾಂತರಗಳಿಂದ ಮದುವೆ ಮುಂದೂಡಲಾಗಿತ್ತು. ಬುಧವಾರ(ಜು.13) ರ ತಡರಾತ್ರಿ ಈತ ವಿಷ ಸೇವಿಸಿದ್ದು, ವಾಂತಿ ಮಾಡುತ್ತಿದ್ದ ಎನ್ನಲಾಗಿದೆ.

Ad Widget

ವಿಷಯ ತಿಳಿದು ತಕ್ಷಣ ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದಾಗಿ‌ ಹೇಳಲಾಗಿದೆ. ಮೃತರು, ತಂದೆ, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *