ಸಮಗ್ರ ನ್ಯೂಸ್: ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಮಂಗಳವಾರದಿಂದ ರಾಜ್ಯಾದ್ಯಂತ ಮಳೆ ಪ್ರಮಾಣ ಕಡಿಮೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈರುತ್ಯ ಮುಂಗಾರು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಬೀದರ್, ಕಲಬುರಗಿ, ಬೆಳವಾಗಿ ಹಾಗೂ ಹಾಸನ ಜಿಲ್ಲೆಯಲ್ಲಿ ಇಂದು ಯೆಲ್ಲೊ ಆಲರ್ಟ್ ಘೋಷಿಸಲಾಗಿದೆ.
ಕರಾವಳಿ ತೀರದಲ್ಲಿ ಗಂಟೆಗೆ 40 ಕಿಲೋ ಮೀಟರ್ ನಿಂದ 50 ಕಿಲೋ ಮೀಟರ್ ವರೆಗೆ ಬಿರುಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತವಾರಣ ನಾಳೆಯವರೆಗೂ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.