Ad Widget .

ಶಿರಾಡಿ ಘಾಟ್ ನಲ್ಲಿ ಈ ನಿಯಮ ಪಾಲನೆಯೊಂದಿಗೆ ಲಘು ವಾಹನ ಸಂಚಾರಕ್ಕೆ ಅವಕಾಶ

ಸಮಗ್ರ ನ್ಯೂಸ್: ಮಂಗಳೂರು -ಬೆಂಗಳೂರು ಸಂಪರ್ಕಿಸುವ ಮುಖ್ಯ ರಸ್ತೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನಲ್ಲಿ ಅನಿರ್ಧಿಷ್ಟಾವಧಿಗೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ದೋಣಿಗಲ್ ಪ್ರದೇಶದಲ್ಲಿ ಭೂ ಕುಸಿತವಾದ ಹಿನ್ನಲೆಯಲ್ಲಿಈ ತೀರ್ಮಾನ ಕೈಗೊಳ್ಳಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶಿರಾಡಿ ಘಾಟ್‌ನಲ್ಲಿ ಲಘು ವಾಹನ ಸಂಚಾರಕ್ಕೆ ಹಾಸನ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹೊಸ ರಸ್ತೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

Ad Widget . Ad Widget . Ad Widget .

ಶಿರಾಡಿ ಘಾಟ್ ಮೂಲಕ ಮಂಗಳೂರಿನಿಂದ ಬೆಂಗಳೂರಿಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾರು, ಟೆಂಪೋ, ಮಿನಿ ವ್ಯಾನ್, ದ್ವಿಚಕ್ರ ವಾಹನ ಮತ್ತು ಆಂಬ್ಯುಲೆನ್ಸ್‌ಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೋಗುವ ಲಘು ವಾಹನದ ಪ್ರಯಾಣಿಕರು ಶಿರಾಡಿ ಘಾಟ್ ಮೂಲಕ ಮಾರನಹಳ್ಳಿ- ಕಾಡುಮನೆ- ಹಾರ್ಲೆ-ಕೂಡಿಗೆ- ಆನೆಮಹಲ್ -ಸಕಲೇಶಪುರ ಮಾರ್ಗದ ಮೂಲಕ ಬೆಂಗಳೂರಿಗೆ ತೆರೆಳಬಹುದು. ಆದರೆ ಗಂಟೆಗೆ 30 ಕಿ. ಮೀ. ವೇಗದಲ್ಲಿ ಮಾತ್ರ ವಾಹನ ಸಂಚಾರ ಮಾಡಬಹುದಾಗಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುವ ಲಘು ವಾಹನ ಪ್ರಯಾಣಿಕರು ಸಕಲೇಶಪುರ-ಆನೆಮಹಲ್- ಕ್ಯಾನಹಳ್ಳಿ-ಚಿನ್ನಳ್ಳಿ-ಕಡಗರವಳ್ಳಿ- ಮಾರನಹಳ್ಳಿ ಮೂಲಕ ಶಿರಾಡಿ ಘಾಟ್ ಸಂಪರ್ಕ ಸಾಧಿಸಿ ಮಂಗಳೂರಿಗೆ ಬರಬಹುದು.

ಈ ಎರಡೂ ಮಾರ್ಗಗಳಲ್ಲಿ ಏಕಮುಖ ಸಂಚಾರವನ್ನು ಮಾತ್ರ ಮಾಡಲಾಗಿದೆ. ಎರಡೂ ರಸ್ತೆಯ ಆರಂಭ ಮತ್ತು ಅಂತ್ಯದಲ್ಲಿ ಪೊಲೀಸ್ ನಿಯೋಜನೆ ಮಾಡುವಂತೆ ಹಾಸನ ಪೊಲೀಸರಿಗೆ ಸೂಚಿಸಲಾಗಿದೆ.

Leave a Comment

Your email address will not be published. Required fields are marked *