ಮತ್ತೆ ಶುರುವಾದ ಮಳೆಯಾರ್ಭಟ| ಎಂಟು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯ ಹವಾಮಾನ ಇಲಾಖೆ ಇಂದು ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಬೆಳಗಾವಿಯಲ್ಲಿ ಇಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆ ಉತ್ತರ ಒಳನಾಡಿನ ಕಲಬರುಗಿ ಮತ್ತು ಬೀದರ್ ನಲ್ಲಿಯೂ ಯೆಲ್ಲೋ ಅಲರ್ಟ್ ಇದೆ.

. Ad Widget . Ad Widget . Ad Widget

ಇನ್ನುಳಿದ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಮೈಸೂರು ಭಾಗದಲ್ಲಿ ತುಂತುರು ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 27 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ನಗರದಲ್ಲಿಯೂ ಮಳೆಯ ಸಿಂಚನ ಇರಲಿದೆ.

. Ad Widget .

ಕರಾವಳಿ ಭಾಗದಲ್ಲಿ ಗಾಳಿಯ ವೇಗ ಸದ್ಯ ಗಂಟೆಗೆ 40 ಕಿ. ಮೀ ಇದೆ. ಇದು ಇಂದು ಗಂಟೆಗೆ 50 ರಿಂದ 60 ಕಿಮೀ ಇರಲಿದೆ. ಸಮುದ್ರಕ್ಕೆ ಇಳಿಯುವ ಮೀನುಗಾರರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

Leave a Comment

Your email address will not be published. Required fields are marked *