ಸಮಗ್ರ ನ್ಯೂಸ್: ಕೋತಿಯೊಂದು ಮೂರು ಅಂತಸ್ತಿನ ಮನೆಯ ಛಾವಣಿಯಿಂದ ಮಗುವನ್ನು ಎಸೆದ ಪರಿಣಾಮ ನಾಲ್ಕು ತಿಂಗಳ ಗಂಡು ಮಗು ಸಾವನ್ನಪ್ಪಿದ ಘಟನೆಯೊಂದು ಉತ್ತರ ಪ್ರದೇಶದ ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ.
ಈ ಬಗ್ಗೆ ವರದಿಯಾಗಿದ್ದು, ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಕಳುಹಿಸಲಾಗಿದೆ ಎಂದು ಬರೇಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಲಿತ್ ವರ್ಮಾ ತಿಳಿಸಿದ್ದಾರೆ.
ಬರೇಲಿಯ ಡುಂಕಾ ಗ್ರಾಮದ ನಿವಾಸಿ ನಿರ್ದೇಶ್ ಉಪಾಧ್ಯಾಯ (25) ಅವರು ಶುಕ್ರವಾರ ಸಂಜೆ ತಮ್ಮ ಪತ್ನಿ ಮತ್ತು ನಾಲ್ಕು ತಿಂಗಳ ಮಗುವಿನೊಂದಿಗೆ ತಮ್ಮ ಮೂರು ಅಂತಸ್ತಿನ ಮನೆಯ ಟೆರೇಸ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕೋತಿಗಳ ಹಿಂಡು ಛಾವಣಿಯ ಮೇಲೆ ಬಂದವು. ದಂಪತಿಗಳು ಮಂಗಗಳನ್ನು ಓಡಿಸಲು ಪ್ರಯತ್ನಿಸಿದರು.
ಆದರೆ ಕೋತಿಗಳ ಹಿಂಡು ನಿರ್ದೇಶ್ ಅವರನ್ನು ಸುತ್ತುವರಿಯಿತು. ಕೂಡಲೇ ಅವರು ಮೆಟ್ಟಿಲುಗಳ ಕಡೆಗೆ ಓಡಲು ಪ್ರಯತ್ನಿಸಿದಾಗ, ಮಗು ಅವನ ಕೈಯಿಂದ ಕೆಳಗೆ ಬಿದ್ದಿತು. ನಿರ್ದೇಶ್ ಮಗುವನ್ನು ಹಿಡಿಯುವ ಮೊದಲು, ಕೋತಿಯೊಂದು ಬಂದು ನವಜಾತ ಶಿಶುವನ್ನು ಹಿಡಿದು ಛಾವಣಿಯಿಂದ ಎಸೆದಿದೆ. ನೆಲಕ್ಕೆ ಬಿದ್ದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದೆ.