ಸಮಗ್ರ ನ್ಯೂಸ್: ವಿದೇಶದಿಂದ ಬಂದ ಯುವಕನೋರ್ವನಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತನನ್ನು ಕಣ್ಣೂರಿನ ಪರಿಯಾರಂ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಕಣ್ಣೂರು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ವಿದೇಶದಿಂದ ಶನಿವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಇಲ್ಲಿಗೆ ಬಂದಿದ್ದ ಯುವಕನಲ್ಲಿ ಮಂಕಿಪಾಕ್ಸ್‌ನ ಲಕ್ಷಣಗಳು ಕಾಣಿಸಿದ್ದರಿಂದ ಆತ ಸ್ವತಃ ಬಂದು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಆರೋಗ್ಯಾಧಿಕಾರಿ ತಿಳಿಸಿದರು.
ಯುವಕನ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷೆಯ ಫಲಿತಾಂಶ ಬಂದ ಬಳಿಕವಷ್ಟೇ ಆತನಿಗೆ ಮಂಕಿಪಾಕ್ಸ್ ತಗಲಿದೆಯೇ ಎಂಬುದು ಸ್ಪಷ್ಟವಾಗಲಿದೆ. ಪ್ರಸ್ತುತ ಯುವಕನನ್ನು ಐಸೋಲೇಶನ್‌ನಲ್ಲಿರಿಸಿ ನಿಗಾ ಇರಿಸಲಾಗಿದೆ ಎಂದು ಅವರು ವಿವರಿಸಿದರು. ಕೇರಳದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಜು. 12ರಂದು ದಾಖಲಾಗಿತ್ತು.