ಮಂಗಳೂರು: ಹಿಜಬ್ ವಿವಾದದ ಬೆನ್ನಲ್ಲೇ ಅಲ್ಪಸಂಖ್ಯಾತರು ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ತೋರಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13 ಮುಸ್ಲಿಮ್ ಆಡಳಿತ ಸಂಸ್ಥೆಗಳು ಪಿಯು ಕಾಲೇಜು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಕರ್ನಾಟಕದ ಹಿಜಬ್ ವಿವಾದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಚರ್ಚೆ ಆಗಿತ್ತು. ಇದಾದ ಬಳಿಕ ಹೊಸ ಕಾಲೇಜು ತೆರೆಯಲು 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಪಿಯು ಬೋರ್ಡ್‍ಗೆ ಅರ್ಜಿ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಬಂದ 14 ಅರ್ಜಿಗಳ ಪೈಕಿ 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳದ್ದಾಗಿದೆ.
ಈ 14 ಅರ್ಜಿಗಳ ಪೈಕಿ 2 ಕಾಲೇಜಿಗಷ್ಟೇ ಪಿಯು ಕಾಲೇಜು ಸ್ಥಾಪಿಸಲು ಈಗಾಗಲೇ ಅನುಮತಿ ನೀಡಲಾಗಿದೆ. ಒಂದು ಮುಸ್ಲಿಂ ಮತ್ತು ಮತ್ತು ಸುಬ್ರಹ್ಮಣ್ಯದ ಒಂದು ಮುಸ್ಲಿಮೇತರ ಆಡಳಿತದ ಕಾಲೇಜಿಗೆ ಅನುಮತಿ ಸಿಕ್ಕಿದೆ. ಉಳಿದ 12 ಮುಸ್ಲಿಂ ಆಡಳಿತದ ಕಾಲೇಜಿನ ಅನುಮತಿ ಅರ್ಜಿಗಳು ಪೆಂಡಿಂಗ್‍ನಲ್ಲಿ ಇಡಲಾಗಿದೆ.