ಸುಳ್ಯ: ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಗಳಿಂದ ತಾಲೂಕಿನ ಕಳಂಜ ಗ್ರಾಮದಲ್ಲಿ ಹಲ್ಲೆಗೊಳಗಾಗಿದ್ದ ಮುಹಮ್ಮದ್ ಮಸೂದ್ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Ad Widget ... ..

ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ, ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು.

Ad Widget

ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್ ಮತ್ತು ಭಾಸ್ಕರ್ ಬಂಧಿತರಾಗಿದ್ದಾರೆ.‌ ಬಂಧಿತ ಆರೋಪಿಗಳ ಮೇಲೆ ಪೊಲೀಸರು ಕೊಲೆ ಕೇಸು ದಾಖಲಿಸಿದ್ದಾರೆ.

Leave a Comment

Your email address will not be published. Required fields are marked *