Ad Widget .

ಶಿರಾಡಿ ಘಾಟ್ ನಲ್ಲಿ ಹಗಲು ಲಘು ವಾಹನ ಸಂಚಾರಕ್ಕೆ ಅವಕಾಶ – ಹಾಸನ ಡಿಸಿ ಗಿರೀಶ್ ಆರ್ ಆದೇಶ

ಸಮಗ್ರ ನ್ಯೂಸ್: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿ ಘಾಟ್ ನಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ, ಇಲ್ಲಿನ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶ ಹೊರಡಿಸಿದ್ದಾರೆ. ಆದರೆ, ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕಾರು, ಜೀಪು, ಟೆಂಪೊ, ಮಿನಿ ವ್ಯಾನ್‌, ಸಾರಿಗೆ ಸಂಸ್ಥೆಯ ಬಸ್‌, ರಾಜಹಂಸ, ಐರಾವತ ಬಸ್‌ಗಳು, 6 ಚಕ್ರದ ವಾಹನಗಳು, 20 ಟನ್ ಸಾಮರ್ಥ್ಯದ ಸರಕು ಸಾಗಣೆ ವಾಹನಗಳು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಈ ಮಾರ್ಗದಲ್ಲಿ ಸಂಚರಿಸಬಹುದು. ಆಂಬುಲೆನ್ಸ್‌, ಅಗ್ನಿಶಾಮಕದಳದ ವಾಹನ ಸೇರಿದಂತೆ ತುರ್ತು ಸೇವಾ ವಾಹನಗಳು 24 ಗಂಟೆ ಸಂಚಾರ ಮಾಡಬಹುದು.

Ad Widget . Ad Widget . Ad Widget .

ಬುಲೆಟ್‌ ಟ್ಯಾಂಕರ್‌ಗಳು, ಕಾರ್ಗೋ ಕಂಟೈನರ್‌ಗಳು, ಉದ್ದ ಚಾಸಿ ಹೊಂದಿ ವಾಹನಗಳು, ಮಲ್ಟಿ ಎಕ್ಸೆಲ್‌ ಟ್ರಕ್‌ ಟ್ರೈಲರ್‌ಗಳು ಹಾಗೂ 20 ಟನ್‌ಗಿಂತ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಜುಲೈ 15 ರಿಂದ ಇಲ್ಲಿಯವರೆಗೆ ಈ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

Leave a Comment

Your email address will not be published. Required fields are marked *