ಮೈಸೂರು: ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ರಾಜ್ಯದ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಮತ್ತು ಕೇಂದ್ರಕ್ಕೆ ಪ್ರಾದೇಶಿಕತೆಯ ಕಾವು ಹೆಚ್ಚಾಗಿದ್ದು, ರಾಜ್ಯಗಳ ನಡುವೆ ಸರಿಯಾಗಿ ಅನುದಾನ ಹಂಚಿಕೆ ಮಾಡುವಲ್ಲಿ ವಿಫಲವಾಗುತ್ತಿದೆ ಎಂದು ರಾಜ್ಯ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ.
ಮೈಸೂರಿನಲ್ಲಿ ನಿನ್ನೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನಗರ ಘಟಕ ವತಿಯಿಂದ ನಡೆದ ರಾಷ್ಟ್ರೀಯ ಐಕ್ಯತೆ ಮತ್ತು ಪ್ರಾದೇಶಿಕ ಸ್ವಾತಂತ್ರ್ಯ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಕೇಂದ್ರದ ಈ ನಡೆ ಒಕ್ಕೂಟ ವ್ಯವಸ್ಥೆಯನ್ನು ಸಡಿಲಗೊಳಿಸುತ್ತಿದೆ ಮತ್ತು ಪ್ರಾದೇಶಿಕವಾದಕ್ಕೆ ನಾಂದಿಯಾಗುತ್ತಿದೆ ಎಂದು ಕೇಂದ್ರದ ತಮ್ಮದೆ ಸರ್ಕಾರದ ವಿರುದ್ಧ ಆಕ್ರೋಷಿತರಾಗಿದ್ದಾರೆ.