ನವದೆಹಲಿ: ಜನಸಾಮಾನ್ಯರ ಕೆಲವು ಪ್ರಮುಖ ಅಂಶಗಳ ಬೆಲೆಯನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಔಷಧಗಳ ಬೆಲೆ ಇಳಿಕೆ ಮಾಡುವ ಮೂಲಕ ಜನರ ಆರೋಗ್ಯ ರಕ್ಷಣೆಯ ವೆಚ್ಚವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಆಗಸ್ಟ್ 15 ರಿಂದ ಮಧುಮೇಹ, ಹೃದಯ ಸಂಬಂಧಿ ರೋಗಗಳು, ಕ್ಯಾನ್ಸರ್ ಮೊದಲಾದವುಗಳ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ.
ಕೇಂದ್ರ ರಸಾಯನಿಕ ಇಲಾಖೆ ಈ ಕುರಿತಾದ ಪ್ರಸ್ತಾವನೆಯನ್ನು ಸಿದ್ಧಪಡಿಸಿದ್ದು ಆಗಸ್ಟ್ 15 ರ ಸ್ವಾತಂತ್ರ್ಯೋತ್ಸವದಂದು ಅಧಿಕೃತ ಪ್ರಕಟಣೆ ಹೊರ ಬೀಳುವ ನಿರೀಕ್ಷೆ ಇದೆ.
ಕೆಲವು ಅಗತ್ಯ ಔಷಧಿಗಳ ಬೆಲೆ ಶೇಕಡ 70ರ ವರೆಗೆ ಕಡಿಮೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಚರ್ಚಿಸಲು ಔಷಧ ಉದ್ಯಮದ ಪ್ರತಿನಿಧಿಗಳೊಂದಿಗೆ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಜುಲೈ 26ರಂದು ಸಭೆ ನಡೆಸಲಿದ್ದಾರೆ.