ಸುಳ್ಯ: ದುಷ್ಕರ್ಮಿಗಳಿಂದ ಚೂರಿ‌ ಇರಿತಕ್ಕೊಳಗಾದ ಹಿಂದೂ ಯುವ ನಾಯಕ ದುರ್ಮರಣ

ಸಮಗ್ರ ನ್ಯೂಸ್ : ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್ ಅವರ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಪ್ರವೀಣ್ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದಾರೆ‌.

Ad Widget ... ..

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಚಿಕನ್ ಅಂಗಡಿಯ ಮಾಲಕರಾಗಿದ್ದು, ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಪ್ರವೀಣ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Ad Widget

ಸಾಮಾಜಿಕ ಕ್ಷೇತ್ರ, ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಪ್ರವೀಣ್ ನೆಟ್ಟಾರು ಅವರ ಮೇಲೆ ದಾಳಿಯಾಗಿದ್ದು, ದಾಳಿ ಮಾಡಿದವರು ಯಾರೆಂದು ಖಚಿತವಾಗಿಲ್ಲ. ದಾಳಿಯ ಉದ್ದೇಶ ಏನಿತ್ತು ಎಂಬುದು ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೋಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *