ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರೋ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
“ಇತ್ತೀಚೆಗೆ ಉದಯಪುರದಲ್ಲಿ ಕನ್ಹಯ್ಯ ಲಾಲ್ ಹತ್ಯೆ ಆದಾಗ ಕೇವಲ 4 ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಿದ್ದೆವು. ಈಗ ಕರ್ನಾಟಕದಲ್ಲಿ ಪ್ರವೀಣ್ ಹತ್ಯೆಯಾಗಿ 48 ಗಂಟೆ ಆದ್ರೂ ಆರೋಪಿ ಬಂಧನವಾಗಿಲ್ಲ” ಎಂದು ಗೆಹ್ಲೋಟ್ ಪ್ರಶ್ನಿಸಿದ್ದಾರೆ.
ಇನ್ನು, ಕನ್ಹಯ್ಯ ಲಾಲ್ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಿದ್ದೇವೆ. ಕನ್ಹಯ್ಯ ಲಾಲ್ ಇಬ್ಬರು ಪುತ್ರರಿಗೂ ಸರ್ಕಾರಿ ಕೆಲಸ ನೀಡಿದ್ದೇವೆ. ನಾವು ಈ ಮೂಲಕ ಮೃತ ಕುಟುಂಬಸ್ಥರ ದುಃಖದಲ್ಲಿ ಭಾಗಿಯಾಗಿದ್ದೆವು. ಕರ್ನಾಟಕ ಸರ್ಕಾರ ಕೂಡಲೇ ಹಂತಕರನ್ನು ಬಂಧಿಸಿ, ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಪರಿಹಾರ ಘೋಷಿಸಬೇಕು ಎಂದು ಗೆಹ್ಲೋಟ್ ಆಗ್ರಹಿಸಿದ್ದಾರೆ.