ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಕೇಂದ್ರ ಸಚಿವ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಜು.30ರಂದು ಭೇಟಿ ನೀಡಿದ್ದಾರೆ.
ಈ ವೇಳೆ ಮನೆಯವರಿಗೆ ಸಾಂತ್ವನ ಹೇಳಿ 1 ಲಕ್ಷ ರೂ. ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು. ಪ್ರವೀಣ್ ಪತ್ನಿ ಹಾಗೂ ತಂದೆ-ತಾಯಿಯ ಜೊತೆಗೆ ಮಾತನಾಡಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ರೈ ಎಸ್ಟೇಟ್ & ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್.ರೈ ಕೋಡಿಂಬಾಡಿ, ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕಾರ್ಯದರ್ಶಿ ಶ್ರೀನಾಥ್ ಬಾಳಿಲ, ಸುಳ್ಯ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್.ರೈ ಕೆಡೆಂಜಿ, ಪುತ್ತೂರು ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಎಪಿಯಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಪನ್ನೆ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿರಿದ್ದರು.