ಸಮಗ್ರ ನ್ಯೂಸ್: ಬಿಜೆಪಿ ಯುವ ಘಟಕದ ಮುಖಂಡ ದಿವಂಗತ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಕುಟುಂಸ್ಥರಿಗೆ ಸಂತ್ವಾನ ಹೇಳಿದ್ದಾರೆ.
ಸಚಿವೆ ಶೋಭಾ ಕರಂದ್ಲಾಜೆ ಎದುರು ಕುಟುಂಬಸ್ಥರು ನ್ಯಾಯ ಕೊಡಿಸುವಂತೆ ಕಣ್ಣೀರು ಹಾಕಿದರು. ಇದೇ ವೇಳೆ ನ್ಯಾಯ ದೊರಕಿಸುವ ಭರವಸೆಯನ್ನು ನೀಡಿದರು. ಬಳಿಕ ಕುಟುಂಬಸ್ಥರಿಗೆ ಐದು ಲಕ್ಷ ರೂಪಾಯಿ ನಗದು, ಅವರ ಒಂದು ತಿಂಗಳ ಸಂಬಳ ಹಾಗೂ ಚೆಕ್ ನೀಡಿದ್ದಾರೆ.
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಸಾವು ನಮಗೆಲ್ಲರಿಗೂ ದುಃಖ ತಂದಿದೆ. ಅಮಾಯಕರ ಸಾವು ನೋವುಂಟು ಮಾಡಿದೆ. ಪ್ರೀತಿಯಿಂದ ಬದುಕುತ್ತಿದ್ದ ಪ್ರವೀಣ್ ಇಂದು ನಮ್ಮೊಂದಿಗೆ ಇಲ್ಲ. ಸಮಸ್ಯೆ ಆದಾಗ ಪ್ರವೀಣ್ ಸ್ಪಂದಿಸುತ್ತಿದ್ದ. ಹತ್ಯೆಯಾದಾಗ ನಾನು ದೆಹಲಿಯಲ್ಲಿ ಇದ್ದೆ. ಕೇರಳ ಮಾದರಿಯಲ್ಲಿ ಪ್ರವೀಣ್ ಕೊಲೆಯನ್ನು ಮಾಡಿದ್ದಾರೆ. NIA ತನಿಖೆಗೆ ನಡೆಸಲು ನೀಡಿದ್ದಾರೆ. ಈ ತನಿಖೆಯಲ್ಲಿ ನಿಜವಾದ ಆರೋಪಿಗಳು ಸಿಗುತ್ತಾರೆ, ಕಠಿಣ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು