Ad Widget .

15 ದಿನಗಳಲ್ಲಿ ಹೊಸ ಮರಳು‌ ನೀತಿ ಜಾರಿ: ಸಚಿವ ನಿರಾಣಿ

ಬೆಂಗಳೂರು.ಮೇ.24: ಹೊಸ ಮರಳು ನೀತಿ ಹಾಗೂ ಗಣಿ ನೀತಿಯು ಇನ್ನು 15 ದಿನದೊಳಗೆ ಜಾರಿಗೆ ಬರಲಿದೆ. ಈಗಾಗಲೇ ಈ ಸಂಬಂಧ ಕರಡು ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟವರಿಗೆ ಕಳುಹಿಸಲಾಗಿದ್ದು, ಈ ಕುರಿತು ವ್ಯಕ್ತವಾಗುವ ಅನಿಸಿಕೆ, ಅಭಿಪ್ರಾಯಗಳನ್ನು ಪಡೆದು ನೂತನ ಮರಳು ನೀತಿ ಹಾಗೂ ಗಣಿ ನೀತಿಯನ್ನು ಜಾರಿಗೆ ತರಲಾಗುವುದೆಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ಮುರುಗೇಶ ಆರ್. ನಿರಾಣಿ ತಿಳಿಸಿದರು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಈ ವಿಷಯ ತಿಳಿಸಿದರು.

Ad Widget . Ad Widget . Ad Widget .

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಆಡಳಿತದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗುತ್ತಿದೆ. ಹೊಸ ಗಣಿ ನೀತಿಯನ್ನು ತರಲಾಗುತ್ತಿದ್ದು, ತ್ವರಿತ ಕಾರ್ಯನಿರ್ವಹಣೆ ಹಾಗೂ ಸರಳೀಕರಣಕ್ಕಾಗಿ ಏಕಗವಾಕ್ಷಿ ವ್ಯವಸ್ಥೆಯನ್ನು ಜಾರಿ ಮಾಡಲಾಗುತ್ತಿದೆ. ಇಲಾಖೆಯ ಅಧಿಕಾರಿಗಳಿಗೆ ಪೊಲೀಸರಂತೆ ಸಮವಸ್ತ್ರ, ಪ್ರತ್ಯೇಕ ವಾಹನ, ಮೈನಿಂಗ್‍ಗಳಿಗೆ ತೆರಳುವಾಗ ಸೆಕ್ಯೂರಿಟಿ ಗಾರ್ಡ್‍ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಮರಳನ್ನು ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಎತ್ತಿನ ಗಾಡಿಯಲ್ಲಿ ಸಣ್ಣ ಪ್ರಮಾಣದಲ್ಲಿ ಸ್ವಂತ ಬಳಕೆಗೆ ಸಾಗಿಸುವವರ ವಿರುದ್ಧ ಎಫ್.ಐ.ಆರ್ ದಾಖಲು ಮಾಡಬಾರದೆಂದು ಸೂಚಿಸಲಾಗಿದೆ. ಕೊಳ್ಳೇಗಾಲ ಭಾಗದಲ್ಲಿ ಇಂತಹ ಪ್ರಕರಣಗಳು ದಾಖಲಾಗಿರುವ ಬಗ್ಗೆ ಶಾಸಕರು ಗಮನಕ್ಕೆ ತಂದಿದ್ದಾರೆ. ಸ್ವಂತ ಬಳಕೆಗಾಗಿ ಮನೆ, ಅಭಿವೃದ್ಧಿ ನಿರ್ಮಾಣ ಕೆಲಸಗಳಿಗೆ ಸಣ್ಣ ಪ್ರಮಾಣದಲ್ಲಿ ಮರಳು ಸಾಗಿಸುವವರ ವಿರುದ್ಧ ಕ್ರಮ ವಹಿಸದಂತೆ ತಿಳಿಸಲಾಗಿದೆ ಎಂದು ಸಚಿವರು ತಿಳಿಸಿದರು.

Leave a Comment

Your email address will not be published. Required fields are marked *