ಸುರತ್ಕಲ್: ಫಾಝಿಲ್ ಹತ್ಯೆ ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಸುರತ್ಕಲ್ ನಲ್ಲಿ ಫಾಝಿಲ್ ನನ್ನು ಹತ್ಯೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಫಾಸಿಲ್ ಕೊಲೆ ಆರೋಪಿಗಳನ್ನು ಬಂಧಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ.

Ad Widget ... ..

ಕಾರ್ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು ಮಹತ್ವದ ಮಾಹಿತಿ ಕಲೆಹಾಕಿದ್ದರು, ವಿವಿಧ ತಂಡಗಳಲ್ಲಿ ಮಂಗಳೂರು, ಬೆಂಗಳೂರು ಮೊದಲಾದ ಕಡೆ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ನಿನ್ನೆ ರಾತ್ರಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

Ad Widget

ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯಾದ ಮರುದಿನ ಸುರತ್ಕಲ್ ನಲ್ಲಿ ಫಾಸಿಲ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಬೆಂಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಸುರತ್ಕಲ್ ಠಾಣೆಗೆ ಕರೆತರಲಾಗಿದೆ.

Leave a Comment

Your email address will not be published. Required fields are marked *