ಜುಲೈ 3ನೇ ವಾರ ಪಿಯುಸಿ ಪರೀಕ್ಷೆ ಆಗಸ್ಟ್ ನಲ್ಲಿ ಫಲಿತಾಂಶ

ಬೆಂಗಳೂರು ಮೇ.24: ನಿನ್ನೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ಅವರು ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಸಂಬಂಧ ವೀಡಿಯೋ ಸಂವಾದ ನಡೆಸಿದರು.

Ad Widget ... ..

ಈ ವೀಡಿಯೋ ಸಂವಾದದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದು ಸೂಕ್ತ ಎಂಬ ಅಭಿಪ್ರಾಯವನ್ನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ನೀಡಿದ್ದರು. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸುತ್ತಿದೆ. ಜುಲೈ 3ನೇ ವಾರ ಪರೀಕ್ಷೆಗೆ ದಿನಾಂಕ ನಿಗದಿಗೊಳಿಸಲಿದೆ ಎನ್ನಲಾಗುತ್ತಿದ್ದು, ಆಗಸ್ಟ್ ನಲ್ಲಿ ಪರೀಕ್ಷೆಯ ಫಲಿತಾಂಶ ಕೂಡ ಪ್ರಕಟಿಸಲಿದೆ ಎನ್ನಲಾಗುತ್ತಿದೆ.
ಕೊರೋನಾ 2ನೇ ಅಲೆಯ ಭೀಕರತೆಯ ನಡುವೆಯೂ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರೋಗ ನಿಯಂತ್ರಣಕ್ಕೆ ಬಂದ ನಂತ್ರ, ಶಿಕ್ಷಣ ಇಲಾಖೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ.

Ad Widget

Leave a Comment

Your email address will not be published. Required fields are marked *