ಚಲಿಸುತ್ತಿದ್ದ ವಾಹನದ ಮೇಲೆ ಉರುಳಿ ಬಿದ್ದ ಬೃಹತ್ ಮರ

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಆಗುಂಬೆ ಘಾಟಿನಲ್ಲಿ ಚಲಿಸುತ್ತಿದ್ದ ವಾಹನದ ಮೇಲೆ ಬೃಹತ್ ಮರ ಉರುಳಿ ಬಿದ್ದಿದ್ದು, ಸದ್ಯ ಯಾವುದೇ ಅಪಾಯ ಸಂಭವಿಸಿಲ್ಲ.

Ad Widget ... ..

ಆಗುಂಬೆ ಘಾಟಿಯ ಎರಡನೇ ತಿರುವುವಿನಲ್ಲಿ ಕಳೆದ ತಡರಾತ್ರಿ ಚಲಿಸುತ್ತಿದ್ದ ಟಾಟಾ ಏಸ್​ ಮೇಲೆ ಮರ ಉರುಳಿ ಬಿದ್ದಿದೆ. ವಾಹನದಲ್ಲಿ ಚಾಲಕ ಸೇರಿ ಇನ್ನೋರ್ವ ಮುಂಭಾಗದಲ್ಲಿ ಇದ್ದ ಕಾರಣ ಹೆಚ್ಚಿನ ಅನಾಹುತವಾಗಿಲ್ಲ.

Ad Widget

ಮರ ಬಿದ್ದ ತಕ್ಷಣ ಗಾಬರಿಯಾದ ಚಾಲಕ ವಾಹನ ಬಿಟ್ಟು ಕೆಳಗೆ ಇಳಿದು ಓಡಿ ಹೋಗಿದ್ದಾನೆ.

ಮರ ಬಿದ್ದ ಕಾರಣ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ನಂತರ ಅರಣ್ಯಾಧಿಕಾರಿಗಳು, ಪೊಲೀಸರು ಬಂದು ಮರವನ್ನು ತೆರವುಗೊಳಿಸಿದ್ದಾರೆ.

Leave a Comment

Your email address will not be published. Required fields are marked *