ಚಿಕ್ಕಮಗಳೂರು : ಭಾರೀ ಮಳೆಗೆ ಗದ್ದೆಯಲ್ಲಿ ಭೂಕುಸಿತ

ಸಮಗ್ರ ನ್ಯೂಸ್: ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರಿನ ಭತ್ತದ ಗದ್ದೆಯಲ್ಲಿ ಭೂ ಕುಸಿತವಾಗಿದೆ.

Ad Widget ... ..

ಜಿಲ್ಲೆಯ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದ ಭತ್ತದ ಗದ್ದೆಯಲ್ಲಿ ಈ ಘಟನೆ ನಡೆದಿದ್ದು, ನಾಟಿಗೆ ಸಜ್ಜಾಗಿದ್ದ ಭತ್ತದ ಗದ್ದೆಯಲ್ಲಿ ಭೂಕುಸಿತ ಉಂಟಾಗಿದೆ.

Ad Widget

ಭತ್ತದ ಗದ್ದೆಯಲ್ಲಿ ಭೂ ಕುಸಿತವಾದ ಹಿನ್ನೆಲೆ ಕೃಷಿಕರು ಆತಂಕಗೊಂಡಿದ್ದಾರೆ. ಕಳಸ ತಾಲೂಕಿನ‌ ನೆಲ್ಲಿಬೀಡು ಗ್ರಾಮದ ಮನೋಜ್ ಎಂಬುವರಿಗೆ ಸೇರಿದ ಭತ್ತದ ಗದ್ದೆಯಲ್ಲಿ ಭೂ ಕುಸಿತವಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಭೂ ಕುಸಿತ‌ ಸಂಭವಿಸಿದೆ.

ಭತ್ತದ ಗದ್ದೆಯ ಮಧ್ಯಭಾಗದಲ್ಲಿ‌ 60ರಿಂದ 70 ಅಡಿ ಕುಸಿತವಾಗಿರುವ ಬಗ್ಗೆ ವರದಿಯಾಗಿದೆ.

Leave a Comment

Your email address will not be published. Required fields are marked *