ಸಮಗ್ರ ನ್ಯೂಸ್: ರಾಜ್ಯದಲ್ಲಿ ಆರಂಭದಿಂದಲೇ ಮಂಕಿಪಾಕ್ಸ್ ಹರಡದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕೈಗೊಳ್ಳಲಾಗಿದ್ದು ಈವರೆಗೆ ಮಂಕಿಪಾಕ್ಸ್ ಪ್ರಕರಣ ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಮಂಕಿಪಾಕ್ಸ್ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ಇದಕ್ಕಾಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು 24 ಗಂಟೆಯೂ ಪಾಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಇಥಿಯೋಪಿಯಾದಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಇರುವ ಅನುಮಾನದ ಮೇಲೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ ಅದು ಮಂಕಿಪಾಕ್ಸ್ ಅಲ್ಲ, ಸ್ಮಾಲ್ ಪಾಕ್ಸ್ ಎಂದು ದೃಢಪಟ್ಟಿದೆ ಹೀಗಾಗಿ ಗಾಬರಿ ಬೇಡ. ಸಾರ್ವಜನಿಕರಿಗೆ ಸೋಂಕಿನ ಬಗ್ಗೆ ಅರಿವು ಅಗತ್ಯ. ಮಂಕಿಪಾಕ್ಸ್ ಪ್ರಕರಣಕ್ಕೆ ಈವರೆಗೆ ಸೂಕ್ತ ಲಸಿಕೆಯೂ ಇಲ್ಲ. ಜ್ವರ ಸೇರಿದಂತೆ ಇತರ ರೋಗಲಕ್ಷಣಗಳಿಗೆ ಚಿಕಿತ್ಸೆ ನೀಡಿ ಮಂಕಿಪಾಕ್ಸ್ ಸೋಂಕಿತನನ್ನು ಅಪಾಯದಿಂದ ಪಾರು ಮಾಡಬಹುದಾಗಿದೆ ಎಂದು ಸ್ಪಷ್ಟಪಡಿಸಿದರು.