ದರ್ಗಾಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು

ಸಮಗ್ರ ನ್ಯೂಸ್ : ಧಾರವಾಡ ಜಿಲ್ಲೆಯ ಕುಂದಗೊಳದ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದರ್ಗಾಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಅ ನಡೆದಿದೆ.

Ad Widget ... ..

ಕುಂದಗೊಳದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಜಿಗಳೂರು ಬಳಿಯಿರುವ ದರ್ಗಾವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

Ad Widget

ಬೆಂಗಳೂರಿನಲ್ಲಿ ಸಂಬಂಧಿಕರ ಮನೆಯ ಗೃಹಪ್ರವೇಶ ಮುಗಿಸಿ ಹುಬ್ಬಳ್ಳಿಯ ನವನಗರಕ್ಕೆ ವಾಪಸ್ ಬರುವ ವೇಳೆ ನಿಯಂತ್ರಣ ತಪ್ಪಿ ಪಕ್ಕದಲ್ಲಿದ್ದ ದರ್ಗಾಕ್ಕೆ ಕಾರು ಡಿಕ್ಕಿಯಾಗಿದೆ.

ಈ ವೇಳೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಎಇಇ ರವೀಂದ್ರ ನಾಗನಾಥ, ಹನುಮಂತಪ್ಪ ಬೇವಿನಕಟ್ಟೆ, ರೇಣುಕಾ ಬೇವಿನಕಟ್ಟೆ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಕುಂದಗೋಳ ಠಾಣೆ ಇನ್ಸ್ ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *