ಬಂಟ್ವಾಳ; ಚರಂಡಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ : ಚರಂಡಿಯ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಟ್ಲ ಪೇಟೆಯಲ್ಲಿ ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

Ad Widget ... ..

ಮೃತರನ್ನು ಚಂದಳಿಕೆ ನಿವಾಸಿ ಪಕ್ರು ಎಂದು ಗುರುತಿಸಲಾಗಿದೆ. ಅವರ ಮೃತದೇಹ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ಬಳಿ ವಿಟ್ಲ- ಕಾಸರಗೋಡು ಮುಖ್ಯ ರಸ್ತೆಯಲ್ಲಿನ ತೆರೆದ ಸ್ಥಿತಿಯಲ್ಲಿದ್ದ ಚರಂಡಿಗೆ ಕವುಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Ad Widget

ಮದ್ಯಪಾನದ ಅಮಲಿನಲ್ಲಿ ನಿಯಂತ್ರಣ ಕಳೆದುಕೊಂಡ ಪಕ್ರು ಸ್ಲ್ಯಾಬ್ ತೆರೆದ ಸ್ಥಿತಿಯಲ್ಲಿದ್ದ ಚರಂಡಿಗೆ ಆಕಸ್ಮಿಕವಾಗಿ ಬಿದ್ದಿರಬಹುದೆಂದು ಶಂಕಿಸಲಾಗಿದೆ.

ಚರಂಡಿಯಲ್ಲಿ ಮಳೆ ನೀರು ತುಂಬಿದ್ದು, ಕವುಚಿ ಬಿದ್ದ ಪರಿಣಾಮ ಮುಖ ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *