ರಸ್ತೆ, ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ ಪುಟ್ಟ ಬಾಲಕಿ

ಸಮಗ್ರ ನ್ಯೂಸ್: 5 ವರ್ಷದ ಪುಟ್ಟ ಬಾಲಕಿ ಗ್ರಾಮಕ್ಕೆ ರಸ್ತೆ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿರುವ ಸುದ್ದಿ ಶಿವಮೊಗ್ಗದಲ್ಲಿ ನಡೆದಿದೆ.

Ad Widget ... ..

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಬಳಿಯ ಉರುಳುಗಲ್ಲು ಗ್ರಾಮದ 5 ವರ್ಷದ ಬಾಲಕಿ ಸಾನ್ವಿ ಅಂಗನವಾಡಿಗೆ ಹೋಗಿ ಬರಲು ರಸ್ತೆ ಮಾಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾಳೆ.

Ad Widget

ಉರುಳುಗಲ್ಲು ಗ್ರಾಮಸ್ಥರು ಸರಿಯಾದ ರಸ್ತೆ ಸಂಪರ್ಕ ಹಾಗೂ ವಿದ್ಯುತ್ ಇಲ್ಲದೇ ಪರದಾಡುತ್ತಿದ್ದಾರೆ. ಈ ಹಿಂದೆ ಗ್ರಾಮಸ್ಥರು ಸಹ ಹಲವು ಬಾರಿ ಪ್ರತಿಭಟನೆ ಮಾಡಿದ್ದು, ಅದರಿಂದ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆ ಕೆಲವು ದಿನಗಳ ಹಿಂದೆ ರಸ್ತೆ ನಿರ್ಮಿಸಲು ಗ್ರಾಮಸ್ಥರು ಮುಂದಾಗಿದ್ದರು. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿದ್ದಕ್ಕೆ ಗ್ರಾಮಸ್ಥರ ಮೇಲೆ ಅರಣ್ಯ ಇಲಾಖೆಯ ಕೇಸ್ ಕೂಡ ಹಾಕಿದ್ದರು.

ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಸ್ಥಳೀಯರು ಅರಣ್ಯ ಸಿಬ್ಬಂದಿ ವರ್ತನೆ ವಿರೋಧಿಸಿ ಪಾದಯಾತ್ರೆ ಕೂಡ ಮಾಡಿದ್ದರು. ಈಗ ಈ ಪುಟಾಣಿ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾಳೆ.

Leave a Comment

Your email address will not be published. Required fields are marked *