ಬಡ ಕೂಲಿ ಕಾರ್ಮಿಕರಿಗೆ ಸದ್ಯದಲ್ಲೇ ಇನ್ನೊಂದು ಪ್ಯಾಕೇಜ್: ಸಿಎಂ ಬಿಎಸ್ ವೈ

ಬೆಂಗಳೂರು: ಇನ್ನೊಂದು ವಾರದಲ್ಲಿ ರಾಜ್ಯದ ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಇನ್ನೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Ad Widget ... ..

ಬೆಂಗಳೂರಿನ ಬಿಬಿಎಂಪಿ ಕೋವಿಡ್ ವಾರ್ ರೂಮ್ ಗಳಿಗೆ ನಿನ್ನೆ ಭೇಟಿ ನೀಡಿದ ಸಿಎಂ ಪತ್ರಕರ್ತರನ್ನುದ್ದೇಶಿಸಿ ಮಾತನಾಡುವಾಗ, ರಾಜ್ಯದ ಜನತೆಯ ಕಷ್ಟ ನಮಗೂ ಅರ್ಥವಾಗುತ್ತದೆ ರಾಜ್ಯದ ಹಣಕಾಸಿನ ಇತಿಮಿತಿಯಲ್ಲಿ ಈ ಹಿಂದೆ ಆರ್ಥಿಕ ಪ್ಯಾಕೇಜ್ ಒಂದನ್ನು ಘೋಷಣೆ ಮಾಡಿದ್ದೆವು. ಇದೀಗ ಇನ್ನೊಂದು ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ಬಿಎಸ್ವೈ ತಿಳಿಸಿದ್ದಾರೆ.

Ad Widget

ಮೊದಲಿಗಿಂತ ಕೋವಿಡ್ ಮೂಲಸೌಕರ್ಯ ರಾಜ್ಯದಲ್ಲಿ ಈಗ ಬಹುವಾಗಿ ಸುಧಾರಿಸಿದೆ. ವ್ಯಾಕ್ಸಿನ್ ಕೊರತೆ ಇರುವುದು ನಿಜ ಸದ್ಯದಲ್ಲಿ ಇದೆಲ್ಲವೂ ಸುಧಾರಣೆಯಾಗಲಿದೆ. ಅನವಶ್ಯಕವಾಗಿ ಏನೇನೋ ಮಾತನಾಡುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅವಧಿಯಲ್ಲಿ ರಾಜ್ಯದ ಜನತೆಗೆ ತಿಳಿದಿದೆ ಎಂದಿದ್ದಾರೆ.

Leave a Comment

Your email address will not be published. Required fields are marked *