ಬೆಂಗಳೂರು: 2022ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಆ.12ರಿಂದ 25ರ ವರೆಗೆ ರಾಜ್ಯಾದ್ಯಂತ 307 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ಪ್ರಸಕ್ತ ಸಾಲಿನ ಏಪ್ರಿಲ್/ಮೇ ತಿಂಗಳಿನಲ್ಲಿ ನಡೆದ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ.
ಈಗಾಗಲೇ 1,85,449 ಅಭ್ಯರ್ಥಿಗಳು ಪರೀಕ್ಷೆ ನೋಂದಣಿ ಮಾಡಿಕೊಂಡಿದ್ದು, ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಶುಕ್ರವಾರ ಮೊದಲ ದಿನ ಪ್ರಥಮ ಭಾಷೆ ಕನ್ನಡ ಮತ್ತು ಅರೇಬಿಕ್ ಪರೀಕ್ಷೆ ನಡೆಯಲಿವೆ ಎಂದು ಪಿಯು ಇಲಾಖೆ ನಿರ್ದೇಶಕ ಆರ್. ರಾಮಚಂದ್ರನ್ ತಿಳಿಸಿದ್ದಾರೆ.
ಮುಖ್ಯ ಪರೀಕ್ಷೆ ನಡೆಸಿದ ಮಾದರಿಯಲ್ಲಿಯೇ ಪೂರಕ ಪರೀಕ್ಷೆಗೂ ಸಿದ್ಧತೆ ಮಾಡಿಕೊಳ್ಳಲಾಗಿದೆ. 307 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 307 ಕೊಠಡಿ ಮೇಲ್ವಿಚಾರಕರು, 307 ಮಂದಿ ವಿಚಕ್ಷಣ ದಳ ಮತ್ತು 307 ಮಂದಿಯನ್ನು ಪರಿಶೀಲನೆಗೆ ನೇಮಿಸಲಾಗಿದೆ ಎಂದು ಪಿಯು ಇಲಾಖೆ ನಿರ್ದೇಶಕ ಆರ್. ರಾಮಚಂದ್ರನ್ ತಿಳಿಸಿದ್ದಾರೆ.