ರಾಷ್ಟ್ರಧ್ವಜಕ್ಕೆ ಅಪಮಾನ; ನಳಿನ್ ಕುಮಾರ್, ಬೈರತಿ ಬಸವರಾಜ್ ವಿರುದ್ದ ದೂರು ನೀಡಲು ಚಿಂತನೆ

ಸಮಗ್ರ ನ್ಯೂಸ್: ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವರು ಅಪಮಾನ ಮಾಡಿದ್ದಾರೆ.

Ad Widget ... ..

ರಾಷ್ಟ್ರ ಧ್ವಜದ ಬ್ಯಾಡ್ಜ್ ಅನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿದ ನಳೀನ್ ಕುಮಾರ್ ಕಟೀಲ್ ಹಾಗೂ ಭೈರತಿ ಬಸವರಾಜ್. ನಿನ್ನೆ ಕೆ.ಆರ್.ಪುರಂ ನಲ್ಲಿ ನಡೆದ ರೋಡ್ ಶೋ ನಲ್ಲಿ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ದೂರು ನೀಡಲು ಚಿಂತನೆ ನಡೆಸಲಾಗಿದೆ.

Ad Widget

ಇನ್ನೂ ತಿಪಟೂರುನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿರಂಗಾ ಯಾತ್ರೆ ನಡೆಸುವ ಸಮಯದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದು ರಾಷ್ಟ್ರಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ‌ ಕೇಳಿ ಬಂದಿದೆ. ಈ ಸಂಬಂಧ ಯುವ ಕಾಂಗ್ರೆಸ್ ಘಟಕವು ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದೆ.

ನಗರದಲ್ಲಿ ಬುಧವಾರ ಎಬಿವಿಪಿ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸಚಿವರು, ಶಾಲಾ ಮಕ್ಕಳು, ಶಿಕ್ಷಕರು ಭಾಗವಹಿಸಿದ್ದರು. ಈ ಸಮಯದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ವಿ. ಹರಿಪ್ರಸಾದ್ ದೂರು ನೀಡಿದ್ದಾರೆ.

Leave a Comment

Your email address will not be published. Required fields are marked *