ಸಂಸದೀಯ ಮಂಡಳಿಯಲ್ಲಿ ಮಾಜಿ ಸಿಎಂ ಬಿಎಸ್ವೈಗೆ ಸ್ಥಾನ| ಕಮ್ಮಿಯಾಗಿಲ್ಲ ಯಡ್ಡಿ ವೈಖರಿ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕರ್ನಾಟಕ ಬಿಜೆಪಿಯಲ್ಲಿ ಸೈಡ್‌ಲೈನ್ ಆಗಿಲ್ಲ. 2021ರ ಜುಲೈ 26ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಯಡಿಯೂರಪ್ಪಗೆ ಪಕ್ಷದ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ.

Ad Widget ... ..

ಬುಧವಾರ ಬಿಜೆಪಿ ಸಂಘಟನಾತ್ಮಕವಾಗಿ ಕೆಲವು ಬದಲಾವಣೆ ಮಾಡಿದೆ. ಪಕ್ಷದಲ್ಲಿನ ಪ್ರಮುಖ ತೀರ್ಮಾನ ಕೈಗೊಳ್ಳುವ ಸಮಿತಿಯಾದ ಸಂಸದೀಯ ಮಂಡಳಿ ಪುನಾರಚನೆ ಮಾಡಲಾಗಿದೆ. ಹಲವು ಹೊಸ ಮುಖಗಳನ್ನು ಸಮಿತಿಗೆ ಸೇರಿಸಿಕೊಳ್ಳಲಾಗಿದೆ.

Ad Widget

ಕರ್ನಾಟಕದ ಮಾಜಿ ಮುಖ್ಯಮಂತ್ರಿ 77 ವರ್ಷದ ಬಿ. ಎಸ್. ಯಡಿಯೂರಪ್ಪರನ್ನು ಸಂಸದೀಯ ಮಂಡಳಿಗೆ ಸದಸ್ಯರಾಗಿ ಸೇರಿಸಿಕೊಳ್ಳಲಾಗಿದೆ. ಈ ಮೂಲಕ ಕರ್ನಾಟಕ ಬಿಜೆಪಿಯಲ್ಲಿ ಯಡಿಯೂರಪ್ಪರನ್ನು ಸೈಡ್‌ಲೈನ್ ಮಾಡಿಲ್ಲ ಎಂದು ಹೈಕಮಾಂಡ್ ನಾಯಕರು ಸ್ಪಷ್ಟ ಸಂದೇಶ ನೀಡಿದ್ದಾರೆ.

Leave a Comment

Your email address will not be published. Required fields are marked *