ಬೆಂಗಳೂರು: ಇದೀಗ ದೇಶದಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ನೀಡಿದ ಕರೆಯಂತೆ ಪ್ರತಿಯೊಂದು ಮನೆ ಮೇಲೂ ರಾಷ್ಟ್ರಧ್ವಜ ಹಾರಾಡಿದೆ.
ಇದರ ಮಧ್ಯೆ ಕರ್ನಾಟಕದ ಕೆಲವು ಶಾಲೆಗಳಲ್ಲಿ ರಾಷ್ಟ್ರಗೀತೆಯನ್ನು ಪ್ರತಿನಿತ್ಯ ಹಾಡಿಸದಿರುವ ವಿಷಯ ಬಹಿರಂಗವಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯ ಮಾಡಲು ನಿರ್ಧರಿಸಿದೆ.
ಹೀಗಾಗಿ ಮದರಸಗಳು ಸೇರಿದಂತೆ ಪ್ರತಿಯೊಂದು ಶಾಲೆಗಳು ಇನ್ನು ಮುಂದೆ ರಾಷ್ಟ್ರಗೀತೆಯನ್ನು ಹಾಡುವುದು ಕಡ್ಡಾಯವಾಗಲಿದೆ.
ಈ ಬಗ್ಗೆ ಆದೇಶ ಇನ್ನೆರಡು ದಿನಗಳೊಳಗಾಗಿ ಹೊರಬೀಳುವ ಸಾಧ್ಯತೆಯಿದ್ದು, ಈ ಆದೇಶವನ್ನು ಉಲ್ಲಂಘಿಸಿದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.