ಮಗದೊಮ್ಮೆ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮಿಜಿ !

ಹಾರನಹಳ್ಳಿ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಈ ಬಾರಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಸೊರಬ ತಾಲೂಕಿನ ಜಡೆ ಸಂಸ್ಥಾನ ಮಠದ ಆವರಣದಲ್ಲಿ ಜೀಣೋರ್ದ್ಧಾರವಾಗುತ್ತಿರುವ ಶ್ರೀ ಕುಮಾರ ಕಂಪಿನ ಸಿದ್ಧವೃಷಭೇಂದ್ರ ಕತೃ ಗದ್ದುಗೆಯ ಶಿಲಾಮಯ ಕಟ್ಟಡದ ಕಾಮಗಾರಿಯನ್ನು ಬುಧವಾರ ವೀಕ್ಷಿಸಿ, ಕತೃ ಗದ್ದುಗೆಯ ದರ್ಶನ ಪಡೆದ ನಂತರ ಮಾತನಾಡಿದ್ದಾರೆ.

Ad Widget ... ..

ಶುಭಕೃತ ನಾಮಸಂವತ್ಸರ ದೇಶದಲ್ಲಿ ಅಶುಭವನ್ನುಂಟು ಮಾಡಲಿದೆ. ಮಠದಲ್ಲಿ ಪಂಚಾಗ್ನಿ ಮಾಡುವ ಸಂದರ್ಭದಲ್ಲಿ ಅಗ್ನಿಕುಂಡ ಒಡೆದು ಗಾಯ ಮಾಡಿತು. ಪೂರ್ಣ ಪ್ರಮಾಣದಲ್ಲಿ ಪೂಜೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ನಾಡಿನಲ್ಲಿ ಬೆಂಕಿ ಅನಾಹುತ ಸಂಭವಿಸುವ ಲಕ್ಷಣವಿದೆ ಎಂದೆನಿಸುತ್ತದೆ. ಕಾರ್ತಿಕ ಮಾಸದಲ್ಲಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗಲಿದ್ದು, ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ಇಬ್ಭಾಗವಾಗುವ ಸಂಭವವಿದೆ.

Ad Widget

ಮತಾಂಧತೆಯಿಂದಾಗಿ ಧಾರ್ಮಿಕ ಸಂಘರ್ಷಗಳು ನಡೆಯುತ್ತಿದ್ದು ನೈಜ ಜ್ಞಾನದ ಕೊರತೆಯೇ ಕಾರಣ. ಮುಂದಿನ ದಿನಗಳಲ್ಲಿ ಮತ್ತಷ್ಟು ಉಲ್ಬಣಗೊಳ್ಳಲಿದೆ ಎಂದರು. ನಾಡಿನಲ್ಲಿ ಹಿಂಗಾರು ಮಳೆ ಕಡಿಮೆಯಾಗಿ ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

Leave a Comment

Your email address will not be published. Required fields are marked *