ವಿಕ್ರಾಂತ್ ರೋಣ ರಕ್ಕಮ್ಮನಿಗೆ ಇಡಿ ಶಾಕ್ ! ಆರೋಪಕ್ಕೆ ಜಾಕ್ವೆಲಿನ್ ಹೇಳಿದ್ದೇನು

ಸುಕೇಶ್ ಚಂದ್ರಶೇಖರ್ ಮತ್ತು ಇತರರಿಗೆ ಸಂಬಂಧಿಸಿದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ಸಲ್ಲಿಸಿರುವ ಚಾರ್ಜ್ ಶೀಟ್‌ನಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ.

. Ad Widget . Ad Widget . Ad Widget .

ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ ಎಂಬಾತ ನಡೆಸಿರುವ 200 ಕೋಟಿ ರೂಪಾಯಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ 10 ಕೋಟಿ ಮೌಲ್ಯದ ಉಡುಗೊರೆ ನೀಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ರನ್ನು ಆರೋಪಿ ಎಂದು ಹೆಸರಿಸಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಚಂದ್ರಶೇಖರ್ ಅವರು ವಂಚಿಸಿದ ಮೊತ್ತದಿಂದ 5 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಉಡುಗೊರೆಗಳನ್ನು ಜಾಕ್ವೆಲಿನ್ ಫರ್ನಾಂಡೀಸ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಪರಾಧದ ಆದಾಯದಿಂದ ಉಡುಗೊರೆಗಳನ್ನು ಖರೀದಿಸಲಾಗಿದೆ ಎಂದು ಆಕೆಗೆ ತಿಳಿದಿತ್ತು ಎಂದು ಆರೋಪಿಸಿ ನಟಿಯನ್ನು ಆರೋಪಿ ಎಂದು ಹೆಸರಿಸಿದೆ.

ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿರುವ ನಟಿ, ಡಿಯರ್ ಮಿ ಎಂದು ಪೋಸ್ಟ್ ಆರಂಭಿಸಿರುವ ಜಾಕ್ವೆಲಿನ್, ನಾನು ಬಲಿಷ್ಠವಾಗಿದ್ದೇನೆ, ನನ್ನನ್ನು ನಾನು ಒಪ್ಪಿಕೊಳ್ಳುತ್ತೇನೆ, ಎಲ್ಲವೂ ಸರಿಯಾಗಲಿದೆ. ನಾನು ನನ್ನ ಗುರಿಯನ್ನು ಸಾಧಿಸುತ್ತೇನೆ, ಕನಸನ್ನು ನನಸಾಗಿಸುತ್ತೇನೆ, ನನಗದು ಸಾಧ್ಯವಿದೆ ಎಂದು ಹೇಳಿಕೊಂಡಿದ್ದಾರೆ.

Leave a Comment

Your email address will not be published. Required fields are marked *