ಮಂಗಳೂರು: ಕಲ್ಲುಗಳನ್ನು ಹಾಕಿ ರಸ್ತೆ ಗುಂಡಿ ಮುಚ್ಚಿದ ವಿದ್ಯಾರ್ಥಿ – ಸಾರ್ವಜನಿಕರಿಂದ ಮೆಚ್ಚುಗೆ

ಮಂಗಳೂರು: ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ವಿದ್ಯಾರ್ಥಿಯೊಬ್ಬ ರಸ್ತೆ ಬದಿಯ ಗುಂಡಿಗೆ ಕಲ್ಲುಗಳನ್ನು ಹಾಕಿ ಮುಚ್ಚಿದ ಘಟನೆ ನಡೆದಿದ್ದು, ಬಾಲಕನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ad Widget ... ..

ಕಾಂಕ್ರಿಟ್ ರಸ್ತೆಯಂಚಿನಲ್ಲಿ ಗುಂಡಿಯಿಂದ ಬೈಕ್ ಸವಾರರಿಗೆ, ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿ ರಸ್ತೆಯ ಗುಂಡಿಯನ್ನು ಮುಚ್ಚಿದ್ದಾನೆ.

Ad Widget

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಎಂ. ಜಿ. ಹೆಗಡೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ನಾಳೆಯ ಭರವಸೆಯ ಬೆಳಕು ಈ ವಿದ್ಯಾರ್ಥಿ. ಆತನಿಗೆ ಶುಭವಾಗಲಿ ಎಂದು ಬರೆದು ಕೊಂಡಿದ್ದು, ಇದೀಗ ಈ ವಿಡೀಯೋ ವೈರಲ್ ಆಗಿದೆ.

Leave a Comment

Your email address will not be published. Required fields are marked *