ರಾಜಾಸ್ಥಾನದಲ್ಲಿ ಭೀಕರ ಅಪಘಾತ| 7 ಮಂದಿ‌ ಸಾವು; 25ಕ್ಕೂ ಹೆಚ್ಚು ಮಂದಿ ಗಂಭೀರ

ಸಮಗ್ರ ನ್ಯೂಸ್: ರಾಜಸ್ಥಾನದ ಪಾಲಿ ಜಿಲ್ಲೆಯ ಸುಮೇರ್‌ಪುರ ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಎರಡು ಭಾರೀ ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದು, ಎರಡು ಡಜನ್‌ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Ad Widget ... ..

ಗಾಯಾಳುಗಳನ್ನು ಶಿವಪುರ ಮತ್ತು ಸುಮೇರ್‌ಪುರದ ಆಸ್ಪತ್ರೆಗಳಿಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಮತ್ತು ಗಾಯಗೊಂಡವರು ಪಶ್ಚಿಮ ರಾಜಸ್ಥಾನದ ಸ್ಥಳೀಯ ರಾಮದೇವರ ದೇವಸ್ಥಾನಕ್ಕೆಂದು ಪ್ರಯಾಣಿಸುತ್ತಿದ್ದರು.

Ad Widget

ಗಾಯಗೊಂಡಿರುವವರ ಚೇತರಿಕೆಗಾಗಿ ಪ್ರಧಾನಿ ಕಾರ್ಯಾಲಯ ಟ್ವೀಟ್ ನಲ್ಲಿ ಪ್ರಾರ್ಥಿಸಿ ಮತ್ತು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದೆ.

ಪ್ರಧಾನಿ ಮೋದಿಯವರ ಟ್ವೀಟ್‌ನಲ್ಲಿ, ‘ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದ ಅಪಘಾತವು ದುಃಖಕರವಾಗಿದೆ. ಈ ದುಃಖದ ಸಮಯದಲ್ಲಿ ದುಃಖಿತ ಕುಟುಂಬಕ್ಕೆ ನನ್ನ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಎಂದು ನಾನು ಪ್ರಾರ್ಥಿಸುತ್ತೇನೆ’ ಅಂತಾ ಹೇಳಿದ್ದಾರೆ.

Leave a Comment

Your email address will not be published. Required fields are marked *