ಪುತ್ತೂರು ಉಪವಿಭಾಗದ
ಡಿವೈಎಸ್ಪಿ ಡಾ. ಗಾನಾ ಪಿ.ಕುಮಾರ್ ವರ್ಗಾವಣೆ

ಪುತ್ತೂರು: ಕಳೆದೆರಡು ವರ್ಷಗಳಿಂದ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್‌ ರವರನ್ನು ವರ್ಗಾವಣೆ ಮಾಡಲಾಗಿದೆ.

Ad Widget ... ..

 ಪ್ರಸ್ತುತ ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೀರಯ್ಯ ಹಿರೇಮಠ ಎಂಬವರನ್ನು ಪುತ್ತೂರು ಉಪವಿಭಾಗದ ಡಿವೈಎಸ್ಪಿಯಾಗಿ ನೇಮಕಗೊಳಿಸಿ ಸರಕಾರ ಆದೇಶಿಸಿದೆ ಎಂದು ತಿಳಿದು ಬಂದಿದೆ.

Ad Widget

ಪ್ರಾಯೋಗಿಕ ತರಬೇತಿ ಪೂರ್ಣಗೊಳಿಸಿ ತಿಂಗಳ ಹಿಂದೆಯಷ್ಟೆ ಸಿಐಡಿಗೆ ತಾತ್ಕಾಲಿಕವಾಗಿ ನಿಯುಕ್ತಿಗೊಂಡಿದ್ದ ವೀರಯ್ಯ ಹಿರೇಮಠ ರವರನ್ನು ಇದೀಗ ಪುತ್ತೂರು ಉಪವಿಭಾಗದ ಡಿವೈಎಸ್ಪಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ ಎಂದು ತಿಳಿದು ಬಂದಿದೆ.

ಡಾ.ಗಾನಾ ಪಿ.ಕುಮಾರ್‌ ರನ್ನು ಸಿಐಡಿಗೆ ವರ್ಗಾವಣೆಗೊಳಿಸಿರುವುದಾಗಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *