ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಅಕ್ಕ ತಮ್ಮ ದುರ್ಮರಣ

ಬೆಂಗಳೂರು ಗ್ರಾಮಾಂತರ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅಕ್ಕ-ತಮ್ಮ ದುರ್ಮರಣ ಹೊಂದಿರುವಂತಹ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

Ad Widget ... ..

ಬೆಂಗಳೂರಿನ ಶಾಜಿಯಾ ಭಾನು(26) ಇಬ್ರಾಹಿಂ ಸಾಬ್(16) ಮೃತರು. ಡಾಬಾ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದಿದೆ.

Ad Widget

ಕಾರು ಡಿಕ್ಕಿಯಾಗುತ್ತಿದ್ದಂತೆ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮುರುಗಮಲ್ಲ ದರ್ಗಾಗೆ ಹೋಗಿ, ಚಿಂತಾಮಣಿಯಿಂದ ಬೈಲನರಸಾಪುರಕ್ಕೆ ಬಂದು ಟೀ ಕುಡಿದು ನಂತರ ಕೋಲಾರ ಹೆದ್ದಾರಿ ಮೂಲಕ ಕಾರು ವಾಪಸಾಗುತ್ತಿದ್ದಾಗ ಅಪಘಾತ ನಡೆದಿದೆ.

ಕಾರಿನಲ್ಲಿ ಒಂದೇ ಕುಟುಂಬದ 9 ಜನರು ಪ್ರಯಾಣಿಸುತ್ತಿದ್ದರು. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Comment

Your email address will not be published. Required fields are marked *