Ad Widget .

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ! ಇಲ್ಲಿದೆ ಸಂಪೂರ್ಣ ವಿವರ

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಮಾದರಿಯಲ್ಲೇ ಕೆಪಿಟಿಸಿಎಲ್ ಪರೀಕ್ಷೆಯಲ್ಲೂ ಅಕ್ರಮ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಅಪ್ಪ ಮಗ ಸೇರಿದಂತೆ 9 ಜನರನ್ನು ಬಂಧಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಳಗಾವಿ ಜಿಲ್ಲೆಯ ಗೋಕಾಕ್, ಹುಕ್ಕೇರಿ, ಅಥಣಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ. ಸ್ಮಾರ್ಟ್‌ವಾಚ್‌ ಹಾಗೂ ಬ್ಲೂ ಟೂತ್ ಡಿವೈಸ್ ಬಳಸಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ್ದಾರೆ. ಉಪಪ್ರಾಚಾರ್ಯ ಹಾಗೂ ಪರೀಕ್ಷಾ ಮೇಲ್ವಿಚಾರಕರೂ ಆಗಿದ್ದ ಮಾರುತಿ ಸೋನವಣಿ ಅವರ ಪುತ್ರ ಸುಮಿತ್‌ಕುಮಾರ್, ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರ ಪ್ರವೇಶಿಸಿದ್ದ. ನಂತರ ಅಲ್ಲಿ ಪ್ರಶ್ನೆ ಪತ್ರಿಕೆ ಫೋಟೋ ತಗೆದು ಮಾಲದಿನ್ನಿ ಗ್ರಾಮದ ಸುನಿಲ್ ಭಂಗಿಗೆ ರವಾನಿಸಿದ್ದ. ಇದು ಬಳಿಕ ಹುಕ್ಕೇರಿ ತಾಲೂಕಿನ ಶಿರಹಟ್ಟಿ ಬಿ.ಕೆ.ಗ್ರಾಮದ ಬಸವಣ್ಣಿ ದೊನವಾಡ ಎಂಬಾತನಿಗೆ ರವಾನೆಯಾಗಿತ್ತು. ನಂತರ ಆರೋಪಿಗಳು ಶಿರಹಟ್ಟಿಯ ತೋಟದ ಮನೆಯಲ್ಲಿ ಕುಳಿತು ಫೋನ್ ಮೂಲಕ ಪರೀಕ್ಷಾರ್ಥಿಗಳಿಗೆ ಉತ್ತರ ಹೇಳುತ್ತಿದ್ದರು.

Ad Widget . Ad Widget . Ad Widget .

ಆಗಸ್ಟ್ 7ರಂದು ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ಪರೀಕ್ಷೆ ನಡೆದಿತ್ತು. ಗೋಕಾಕ್‌ನ ಜಿಎಸ್‌ಎಸ್‌ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ. ಸ್ಮಾರ್ಟ್ ವಾಚ್‌ನಲ್ಲಿ ಪ್ರಶ್ನೆ ಪತ್ರಿಕೆ ಫೋಟೋ ತೆಗೆದು, ಟೆಲಿಗ್ರಾಂ ಆಯಪ್ ಮೂಲಕ ಕಿಂಗ್‌ಪಿನ್ ಸಂಜು ಭಂಡಾರಿಗೆ ಆರೋಪಿಗಳು ಪ್ರಶ್ನೆಪತ್ರಿಕೆ ರವಾನೆ ಮಾಡಿದ್ದರು. ಈ ಪ್ರಕರಣದಲ್ಲಿ ಸುನೀಲ್ ಭಂಗಿ ಎನ್ನುವ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸುಮೀತ್‌ಕುಮಾರ್ 4.5 ಲಕ್ಷ ರೂಪಾಯಿಗೆ ಪ್ರಶ್ನೆ ಪತ್ರಿಕೆ ಮಾರಾಟಕ್ಕೆ ಡೀಲ್ ಕುದರಿಸಿದ್ದ, ಈ ಪ್ರಶ್ನೆ ಪತ್ರಿಕೆ ಪಡೆದು 6 ಲಕ್ಷ ರೂ. ಕೊಟ್ಟರೆ ಉತ್ತರ ನೀಡುವ ಬಗ್ಗೆ ಇತರ ಆರೋಪಿಗಳಿಂದ ಡೀಲ್ ನಡೆದಿತ್ತು.
ಮುಂಗಡವಾಗಿ 3 ಲಕ್ಷ ಹಾಗೂ ಕೀ ಆಯನ್ಸರ್ ನೀಡಿದ ಬಳಿಕ 3 ಲಕ್ಷ ನೀಡುವ ಬಗ್ಗೆ ಮಾತುಕತೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

ಸಿದ್ದಪ್ಪ ಮದಿಹಳ್ಳಿ, ಸುನಿಲ್ ಭಂಗಿ, ಅಮರೇಶ ರಾಜೂರ್, ಸಿದ್ದಪ್ಪ ಕೊತ್ತಲ, ರೇಣುಕಾ ಜವಾರಿ, ಪ್ರಶಾಂತ ಮಾನಗಾಂವಿ, ಮಾರುತಿ ಸೋನವಣೆ, ಸಮೀತಕುಮಾರ್ ಸೋನವಣೆ, ಬಸವಣ್ಣ ದೊಣವಾಡ ಬಂಧಿತ ಆರೋಪಿಗಳು. ಪ್ರಕರಣದಲ್ಲಿ ಸುನೀಲ್ ಭಂಗಿ ಎನ್ನುವ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *